MRPL ನೇಮಕಾತಿ 2026: ತಿಂಗಳಿಗೆ ಲಕ್ಷ ಲಕ್ಷ ಸಂಬಳ! ತಕ್ಷಣ ಅರ್ಜಿ ಹಾಕಿ

ನಿಮ್ಮ ವೃತ್ತಿಜೀವನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಅವಕಾಶ! ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಥಿರ-ಅವಧಿ ಉದ್ಯೋಗ (PFTE) ಆಧಾರದಡಿ ಕಾರ್ಯನಿರ್ವಾಹಕ ಹಂತ ಎಲ್1 ಮಟ್ಟದ 05 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 16, 2026.

mrpl job vacancy for freshers
mrpl job vacancy for freshers

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಅಗ್ನಿಶಾಮಕ/ಅಗ್ನಿಶಾಮಕ ಮತ್ತು ಸುರಕ್ಷತೆ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
  • ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

  • (16-07-2026 ರಂತೆ) ಗರಿಷ್ಠ ವಯಸ್ಸಿನ ಮಿತಿ 50 ವರ್ಷಗಳು.
  • ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 03 ವರ್ಷಗಳು, PwBD ಅಭ್ಯರ್ಥಿಗಳಿಗೆ 05 ವರ್ಷಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಲಿಖಿತ (ಸ್ಕ್ರೀನಿಂಗ್) ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ಮೆರಿಟ್ ಪಟ್ಟಿ

ವೇತನ:

  • ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 13-14 ಲಕ್ಷ ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, OBC ಹಾಗೂ EWS ಅಭ್ಯರ್ಥಿಗಳಿಗೆ: ರೂ.118
  • SC/ST, PwBD ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 16, 2026
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜೂನ್ 17, 2026

ಅರ್ಜಿ ಸಲ್ಲಿಸುವ ವಿಧಾನ:

  1. MRPL ಅಧಿಕೃತ ವೆಬ್‌ಸೈಟ್‌ ಇಲ್ಲಿ ಕ್ಲಿಕ್ ಮಾಡಿ ಗೆ ಭೇಟಿ ನೀಡಿ.
  2. ಅರ್ಜಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
  3. ಅರ್ಜಿಯಲ್ಲಿ ಕೇಳಲಾಗುವ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  4. ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
  5. ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ತಿದ್ದುಪಡಿಗಳಿದ್ದರೆ ಸರಿಪಡಿಸಿ ಸಲ್ಲಿಸಿ.
  6. ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

ಯಾವುದೇ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಸಲು ಹೆಚ್ಚಿನ ಸಹಾಯ ಬೇಕಾದರೆ, ದಯವಿಟ್ಟು ಕಾಮೆಂಟ್ ಮಾಡಿ. ಶುಭಾಶಯಗಳು!

Leave a Comment