Kalika Chetarike in Kannada, ಕಲಿಕಾ ಚೇತರಿಕೆ ಕಾರ್ಯಕ್ರಮ ಕನ್ನಡದಲ್ಲಿ, kalika chetarike information in kannada, kalika chetarike program in kannada
Kalika Chetarike in Kannada

ಈ ಲೇಖನಿಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ನೀಡಿದ್ದೇವೆ.
ಕಲಿಕಾ ಚೇತರಿಕೆ
COVID-19 ಸಾಂಕ್ರಾಮಿಕ ಪರಿಸ್ಥಿತಿಯ ಕಾರಣದಿಂದಾಗಿ ಶಾಲೆ ಮುಚ್ಚುವಿಕೆಯು ಶಾಲಾ ಶಿಕ್ಷಣದಲ್ಲಿ ಅಂತರವನ್ನು ಉಂಟುಮಾಡಿದೆ, ಇದು ಪ್ರಪಂಚದಾದ್ಯಂತ ಕಲಿಕೆಯ ಚೇತರಿಕೆಯ ಅಗತ್ಯತೆಗೆ ಕಾರಣವಾಯಿತು. ಈ ಸಮಯದ ಈ ಅಗತ್ಯವನ್ನು ಪರಿಹರಿಸುವ ಸಲುವಾಗಿ, ಕರ್ನಾಟಕ ರಾಜ್ಯವು 2022-23 ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ ವರ್ಷ” ಎಂದು ನೋಡಲು ನಿರ್ಧರಿಸಿದೆ, ಇದು ಪ್ರಸ್ತುತ ತರಗತಿಯನ್ನು ಪೂರ್ಣಗೊಳಿಸುವುದಕ್ಕಿಂತ ಹೆಚ್ಚಾಗಿ ಎಲ್ಲಾ ಶಾಲಾ ಮಕ್ಕಳ ಕಲಿಕೆಯ ಚೇತರಿಕೆಯ ಮೇಲೆ ಹೆಚ್ಚು ಗಮನಹರಿಸುತ್ತದೆ.
ಮಾರ್ಚ್ 18 ರಂದು ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಉದ್ಘಾಟಿಸಿದರು. ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೊಳಿಸಲಾಯಿತು. ಈ ಕಾರ್ಯಕ್ರಮವನ್ನು ದೇಶದಲ್ಲಿ ಅನುಷ್ಠಾನಗೊಳಿಸದ ಮೊದಲ ರಾಜ್ಯ ಕರ್ನಾಟಕವಾಗಿದೆ.
ಮಕ್ಕಳಿಗೆ ತರಬೇತಿ ನೀಡುವ ಶಿಕ್ಷಕರಿಗೆ ಪ್ರತ್ಯೇಕ ಕೈಪಿಡಿಯನ್ನು ತಯಾರಿಸಲಾಗಿದೆ. ಕೈಪಿಡಿ ಮತ್ತು ಕಲಿಕಾ ಹಾಳೆ ಆಧರಿಸಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಾರೆ. ಪ್ರತಿ ತರಗತಿಯಲ್ಲೂ ಹಿಂದಿನ ಎರಡು ವರ್ಷಗಳ ಅಗತ್ಯ ಕಲಿಕಾ ಫಲಗಳು, ಪ್ರಸ್ತುತ ತರಗತಿಯ ಅಗತ್ಯ ಕಲಿಕಾ ಫಲಗಳನ್ನು ಆಧರಿಸಿ ಕಲಿಕಾ ಸಾಮಗ್ರಿಗಳನ್ನು ಸಿದ್ಧಪಡಿಸಲಾಗಿದೆ.
ಪ್ರತಿ ವಿಷಯದ ಕಲಿಕಾ ಹಾಳೆ ಪುಸ್ತಕವು 150 ಪುಟಗಳನ್ನು ಒಳಗೊಂಡಿದೆ. ಕಲಿಕಾ ಹಾಳೆಯಲ್ಲಿ ಹಿಂದಿನ ಎರಡು ವರ್ಷಗಳ ವಿಷಯಗಳು ಮಕ್ಕಳಿಗೆ ಎಷ್ಟು ಅರ್ಥವಾಗಿವೆ ಎಂಬುದನ್ನು ಮೌಲ್ಯಮಾಪನ ಮಾಡಿ ಶಿಕ್ಷಕರು ಅಂಕ ನೀಡುತ್ತಾರೆ. ಆಯ್ದ ಶಿಕ್ಷಕರಿಗೆ ಸರ್ಕಾರದಿಂದ ಈಗಾಗಲೇ ರಾಜ್ಯ ಮಟ್ಟದಲ್ಲಿ ತರಬೇತಿ ನೀಡಲಾಗಿದೆ.
ಮೇ 16 ರಿಂದಲೇ ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಇದಕ್ಕಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ. ಯೋಜನೆ ಅಡಿಯಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ತಾವು ಕಲಿತ ಹಿಂದಿನ ಎರಡು ವರ್ಷಗಳ ವಿಷಯಗಳನ್ನು ಅಭ್ಯಾಸ ಮಾಡಬೇಕಿದೆ.
ಇತರೆ ಪ್ರಬಂಧಗಳು: